ಬೆಂಗಳೂರು : ಆಪರೇಷನ್ ಕಮಲದ ಬಗ್ಗೆ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಯಡಿಯೂರಪ್ಪ ರಾತ್ರಿಯಿಡಿ ಕುಳಿತರೂ ಅವರಿಗೆ ಭಾರತರತ್ನ ಕೊಡಿಸಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶವದೊಂದಿಗೆ ರಾಜಕೀಯ ಮಾಡುವ ಸಿದ್ದರಾಮಯ್ಯ ಖಂಡಿತವಾಗಿಯೂ ಉದ್ಧಾರ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ನಿಂದ ಕಾಂಗ್ರೆಸ್