ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ಧಹಸ್ತ. ನೀವೇ ಪರ್ಸೆಂಟೇಜ್ ವ್ಯವಹಾರದ ಪಿತಾಮಹ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದ್ದಾರೆ. ಆಪ್ತ ಶಾಸಕರಿಗೆ ಮೀಟಿಂಗ್ಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ ಮಾಸ್ಟರ್