ಬೆಂಗಳೂರು : ಫೆಬ್ರವರಿ 8ರಂದು ಕರೆದ ಸಿಎಲ್ ಪಿ ಸಭೆಗೆ ಗೈರಾದ ಶಾಸಕರನ್ನು ಅನರ್ಹಗೊಳಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಪಕ್ಷ ಮುಂದಾಗಿದ್ದು, ಈ ನಿಟ್ಟಿನಲ್ಲಿ ಫೆಬ್ರವರಿ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯನ್ನು ಕರೆದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ ಬಾರಿಯ ಸಿಎಲ್ ಪಿ ಸಭೆಗೆ ಎಲ್ಲಾ ಶಾಸಕರು ಹಾಜರಾಗಲೇಬೇಕು.