ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನೇರವಾಗಿ ಚುನಾವಣೆ ಎದುರಿಸುವ ಸಾಮರ್ಥ್ಯವಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಅಭ್ಯರ್ಥಿಯನ್ನು ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಸಿದ ಕುಮಾರ ಪರ್ವ ಯಶಸ್ವಿಯಾಗಿದ್ದರಿಂದ ವಿಚಲಿತರಾದ ಮುಖ್ಯಮಂತ್ರಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ದುರ್ಬಳಕೆ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಗೆ ಭಯ ಉಂಟುಮಾಡುತ್ತಿದ್ದಾರೆ ಎಂದಿದ್ದಾರೆ. ಲೋಕಾಯುಕ್ತ ತನಿಖೆಗೆ ವಹಿಸಲಾಗಿದ್ದ ಮೈಸೂರಿನ ವಸತಿ ಯೋಜನೆಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕರಣವನ್ನು ಎಸಿಬಿಗೆ ವಹಿಸಲು