ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ನನ್ನ ಮೇಲೆ ಬಹಳ ಪ್ರೀತಿಯಿದೆ. ನನಗೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಹೀಗಾಗಿ ಯಡಿಯೂರಪ್ಪಗೆ ನಾನು ಧನ್ಯವಾದ ತಿಳಿಸುತ್ತೇನೆ. ಸಿಎಂ ಸ್ಥಾನದಿಂದ ಇಳಿಸಿದ ಮೇಲೆ ಅವರು ಸ್ವಲ್ಪ ಡಿಸ್ಟರ್ಬ್ ಆಗಿದ್ದಾರೆ ಎಂದು ವಿಜಯಪುರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧಿಸದ ವಿಚಾರವಾಗಿ ಯಡಿಯೂರಪ್ಪ ಬುಧವಾರ ವಿಧಾನಸಭೆಯಲ್ಲಿ ಉಲ್ಲೇಖಿಸಿದ್ದರು. ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಕ್ಷೇತ್ರ ಬದಲಾಯಿಸುತ್ತಿದ್ದಾರೆ ಎಂದು ಹೇಳಿದ್ದರು. ಇದಕ್ಕೆ