ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಭೇಟಿ ನೀಡಿ, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅವರು ನನ್ನನ್ನು ಗುರುತು ಹಿಡಿದು ಮಾತನಾಡಿಸಿದ್ದಾರೆ. ಆರೋಗ್ಯ ಸುಧಾರಣೆಯಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಜೊತೆಗೆ ಸಚಿವ ಕೆ.ಜೆ.ಜಾರ್ಜ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್