ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಿಂದ ಹೊರಬಂದು ಗೆದ್ದು ತೋರಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇದುವರೆಗೆ ಒಮ್ಮೆಯೂ ಅವರ ಸಾಮರ್ಥ್ಯ ಪ್ರದರ್ಶನ ಮಾಡಿಲ್ಲ ಎಂದು ವ್ಯಂಗವಾಡಿದ್ದಾರೆ. 2006ರಲ್ಲಿ ಜೆಡಿಎಸ್ ತೊರೆದು ಹೋದಾಗ ಕಾಂಗ್ರೆಸ್ ಶಕ್ತಿಯೊಂದಿಗೆ ಉಪಚುನಾವಣೆಯಲ್ಲಿ ಕೇವಲ 200 ಮತಗಳ ಅಂತರದಿಂದ ಗೆದ್ದಿದ್ದಾರೆ. ಆದರೆ, ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು