ಬೆಂಗಳೂರು : ರಾಜ್ಯದ ನೂತನ ಡಿಸಿಎಂ ಆಗಿರುವ ಡಿ.ಕೆ ಶಿವಕುಮಾರ್ ಇದೀಗ ಸಿದ್ದರಾಮಯ್ಯ ಅವರ ಅದೃಷ್ಟದ ನಿವಾಸ ಮೇಲೆ ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯ ಅವರ ಅದೃಷ್ಟದ ನಿವಾಸ ಡಿ.ಕೆ ಶಿವಕುಮಾರ್ ತನಗೆ ಬೇಕೆಂಬ ಬೇಡಿಕೆಯಿಟ್ಟಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ. ಸಿದ್ದರಾಮಯ್ಯ ಹಾಲಿ ಇರುವ ಕುಮಾರಕೃಪಾ ಅವರ ಅದೃಷ್ಟದ ನಿವಾಸವಾಗಿದೆ. ಈ ಹಿಂದೆ ಸಿಎಂ ಆಗಿದ್ದಾಗಲೂ ಸಿದ್ದರಾಮಯ್ಯ ಇದೇ ನಿವಾಸದಲ್ಲಿದ್ದರು, 5 ವರ್ಷ ಯಶಸ್ವಿಯಾಗಿ ಅಧಿಕಾರ ಪೂರೈಸಿದರು.ಈಗಲೂ ಅದೇ ಮನೆಯಲ್ಲಿದ್ದಾರೆ.