ದೇಶದ ಇತಿಹಾಸದಲ್ಲಿ ಈಗ ಸಿದ್ದರಾಮಯ್ಯನವರು ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ಜೇವರ್ಗಿ ತಾಲೂಕಿನ ಯಡ್ರಾಮಿಯಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡುವ ವೇಳೆ ಸಚಿವರು, ಈ ಯಡವಟ್ಟು ಮಾಡಿಕೊಂಡಿದ್ದು, ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ. ಅದಕ್ಕೆ ಉತ್ತರ ಕೊಡಿ ಎಂದು ಹೇಳುತ್ತಿದ್ದಂತೆ ಸಭಿಕರು ಕೂಗಾಡಿದರು. ವೇದಿಕೆ ಮೇಲಿದ್ದ ವ್ಯಕ್ತಿಯೊಬ್ಬರು ಬಂದು ಸಚಿವರ ಕಿವಿಯಲ್ಲಿ ಯಡವಟ್ಟಿನ ಬಗ್ಗೆ ತಿಳಿಸಿದ್ದಾರೆ.