ಮೈಸೂರು : ಡಿ.5 ರಂದು 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ ಉಪಚುನಾವಣೆಯಲ್ಲಿ ಬಿಜೆಪಿಯವರು 8 ಸ್ಥಾನ ಗೆಲ್ಲುವುದಿಲ್ಲ. ಉಪಚುನಾವಣೆಯ ನಂತರ ಬಿಜೆಪಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಯಾತ್ಯತೀತ ದಳಕ್ಕೆ ಯಾವುದೇ ನಿಲುವು ಇಲ್ಲ. ಯಾವುದೇ ಚುನಾವಣೆಯಲ್ಲಿ ಜೆಡಿಎಸ್ ಗೆ ನಿಲುವು ಇಲ್ಲ. ಜೆಡಿಎಸ್ ನಿಲುವಿನಿಂದ ಬಿಜೆಪಿಗೆ ಲಾಭವಾಗುತ್ತದೆ. ಉಪಚುನಾವಣೆಯಲ್ಲಿ ಬಿಜೆಪಿಯವರು ಅಕ್ರಮ ಮಾಡಲು ಸಜ್ಜಾಗಿದ್ದಾರೆ ಎಂದು ಬಿಜೆಪಿ