ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ಗೆ ಹೈಕಮಾಂಡ್ನಂತಾಗಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಮತ್ತೆ ತಮ್ಮದೇ ಪಕ್ಷದ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಯಾರ ಮಾತನ್ನು ಕೇಳುತ್ತಿಲ್ಲ. ಸಾಧನಾ ಸಮಾವೇಶ ಮಾಡುವುದರ ಬದಲಿಗೆ ಆತ್ಮವಿಮರ್ಶೆ ಸಮಾವೇಶ ಮಾಡಬೇಕಾಗಿತ್ತು ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೆಯೇ ಇದೆ. ಸರಕಾರದ ಸಾಧನೆಯ ಬಗ್ಗೆ ಕೇವಲ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದರೆ ಸಾಲದು. ಅದರ ಬಗ್ಗೆ ಚರ್ಚೆಯಾಗಬೇಕು ಎಂದು ತಿರುಗೇಟು