ಎಂಪಿ ಚುನಾವಣೆ ಹತ್ತಿರ ಬರುತ್ತಿರುವಂತೆ ಬಿಜೆಪಿಯವರು ಗಿಮಿಕ್ ಶುರುವಿಟ್ಟುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ದೂರಿದ್ದಾರೆ. ಮೇಲ್ವರ್ಗದ ಬಡವರಿಗೆ ಶೇ. 10 ರಷ್ಟು ಮೀಸಲಾತಿ ನೀಡಬೇಕೆಂದು ಮಂಡಿಸಿರುವ ಮಸೂದೆಯು ಬಿ.ಜೆ.ಪಿ.ಯ ಚುನಾವಣಾ ಗಿಮಿಕ್ ಅಲ್ಲದೆ ಬೇರೇನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಮೇಲ್ವರ್ಗದ ಬಡವರಿಗೆ ಮೀಸಲಾತಿಯನ್ನು ನೀಡುವ ಬಗ್ಗೆ ಬಿ.ಜೆ.ಪಿ.ಯವರು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಈ ಹಿಂದೆ ಮೀಸಲಾತಿಯನ್ನು ವಿರೋಧಿಸುತ್ತಿದ್ದವರೇ ಈಗ ಮಸೂದೆ ಮಂಡಿಸಲು ಮುಂದಾಗಿರುವುದನ್ನು ನೋಡಿದರೆ