ಬೆಂಗಳೂರು : ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನವನ್ನು ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ. ಈ ಕುತೂಹಲ ಮೂಡಲು ಕಾರಣವಾಗಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲಿನಲ್ಲಿ ಸಭೆ ನಡೆದ ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.ಖಾಸಗಿ ಹೋಟೆಲಿನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ