ಬೆಂಗಳೂರು : ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಾಗೂ ಸಿಎಂ ಕುಮಾರಸ್ವಾಮಿ ರಣತಂತ್ರ ರೂಪಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಅತೃಪ್ತ ಶಾಸಕರ ಮನವೊಲಿಸುವ ಸಲುವಾಗಿ ಅವರುಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಿಕೊಡಲು ಮುಂದಾಗಿದ್ದಾರೆ. ಬುಧವಾರದಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗಿದ್ದು, ಮೊದಲ ಹಂತದಲ್ಲಿ ಬಿ.ಸಿ. ಪಾಟೀಲ್, ಡಾ. ಕೆ. ಸುಧಾಕರ್, ರೋಷನ್ ಬೇಗ್ ಹಾಗೂ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಪಕ್ಷದ ಬಿಡದವರಿಗೆ ಸಚಿವ