Widgets Magazine

ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯ

ಕೊಪ್ಪಳ| pavithra| Last Modified ಸೋಮವಾರ, 21 ಜನವರಿ 2019 (07:28 IST)
: ಕಾಂಗ್ರೆಸ್ ಪಕ್ಷದ ಇಕ್ಬಾಲ್ ಅನ್ಸಾರಿ 2019 ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಅಭ್ಯರ್ಥಿಯಾಗಿ
ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಅಧಿಕೃತವಾಗಿ
ಘೋಷಣೆ ಮಾಡಿದ್ದಾರೆ.ಅನ್ಸಾರಿ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ,’ 2019 ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಇಕ್ಬಾಲ್ ಅನ್ಸಾರಿ ಅವರಿಗೆ ಮತ ನೀಡಿ ಗೆಲ್ಲಿಸಬೇಕು’ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.


‘ವಿಧಾನಸಭಾ ಚುನಾವಣೆಯಲ್ಲಿ ಅನ್ಸಾರಿಗೆ ಅನ್ಯಾಯವಾಗಿದೆ. ಆದ್ದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ನ್ಯಾಯಮಾಡಿ. ಅನ್ಸಾರಿ ಅವರಿಗೆ ಮತ ನೀಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ. ಕಳೆದ 4 ವರ್ಷಗಳಿಂದ ಮೋದಿ ಏನೂ ಕೆಲಸ ಮಾಡಿಲ್ಲ’ ಎಂದು ಹೇಳಿದ್ದಾರೆ.


ಈ ಮೂಲಕ ಈ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯ ಪ್ರಬಲ ಆಕಾಂಕ್ಷಿಯಾಗಿದ ಸಿದ್ದರಾಮಯ್ಯ ಆಪ್ತರಾದ ರಾಘವೇಂದ್ರ ಹಿಟ್ನಾಳ್ ಹಾಗೂ ಅವರ ಸಹೋದರ ರಾಜಶೇಖರ್ ಹಿಟ್ನಾಳ್ ಅವರಿಗೆ ಬಿಗ್
ಶಾಕ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ
ಇದರಲ್ಲಿ ಇನ್ನಷ್ಟು ಓದಿ :