ಬೆಂಗಳೂರು : ಅನರ್ಹ ಶಾಸಕ ಎಂಟಿಬಿ ನಾಗರಾಜ್ ಪಕ್ಷ ಬಿಡಲು ಅಕ್ರಮ ದುಡ್ಡಿನ ಹೆದರಿಕೆ ಕಾರಣವೇ? ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಹೊಸಕೋಟೆಯಲ್ಲಿ ಚುನಾವಣಾ ಪ್ರಚಾರ ಮಾಡಿದ ಸಿದ್ದರಾಮಯ್ಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಂಟಿಬಿ 4 ಬಾರಿ ಪಕ್ಷ ಟಿಕೆಟ್ ನೀಡಿತ್ತು. ನಾನು ಮುಖ್ಯಮಂತ್ರಿಯಾಗಿದ್ದಾಗ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಿದ್ದೆ. ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಮಾಡಿದ್ದೆವು. ಇದರ ನಂತರವೂ ಪಕ್ಷ ಬಿಡಲು ಮುಂದಾಗಿದ್ದಾರೆ. ಅಂದರೆ ಇವರಿಗೆ ಅಕ್ರಮ ದುಡ್ಡಿನ ಹೆದರಿಕೆ