ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಋಣ ತೀರುಸುವ ಕೆಲಸ ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸೌಲಭ್ಯಗಳ ಜಾಗೃತಿ ಹಾಗೂ ಬಜೆಟ್ ಪೂರ್ವಭಾವಿ ಚರ್ಚೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಯಾವುದೇ ರಾಜ್ಯದಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ನೀಡದಷ್ಟು ಸೌಲಭ್ಯಗಳನ್ನು ಸಿದ್ದರಾಮಯ್ಯ ನೀಡಿದ್ದಾರೆ. ಆದ್ದರಿಂದ ಉಪಕಾರ ಮಾಡಿದವರನ್ನು ಸ್ಮರಿಸುವ ಮೂಲಕ ಋಣ ತೀರಿಸಬೇಕು ಎಂದಿದ್ದಾರೆ. ಪರಿಶಿಷ್ಟ