ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಸಂಚು ರೂಪಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಕೇವಲ 15 ದಿನಗಳಲ್ಲಿ ಫೋರೆನ್ಸಿಕ್ ವರದಿಯನ್ನು ತರಿಸಿಕೊಂಡು ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಸಿಬಿಯಲ್ಲಿ ಸಿಎಂ ವಿರುದ್ಧ 18 ದೂರುಗಳು ದಾಖಲಾಗಿವೆ. ಯಾವುದೇ ದೂರಿನ ಬಗ್ಗೆ ಇಲ್ಲಿಯವರೆಗೆ ತನಿಖೆಯಾಗಿಲ್ಲ.