ಗುಜರಾತ್ ಚುನಾವಣೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಟು ಮೂಟೆ ಕಟ್ಟಿಕೊಂಡು ಸಿದ್ದರಾಮನಹುಂಡಿಗೆ ಹೋಗುತ್ತಾರೆ. ಬೆಂಗಳೂರಿಗೆ ಬರಲ್ಲ ಎಂದು ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಲೇವಡಿ ಮಾಡಿದ್ದಾರೆ.ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ಸೋಲಿನ ಭೀತಿ ಕಾಡುತ್ತಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರ ಆಡಳಿತದಲ್ಲಿದ್ದರೆ ಅಭಿವೃದ್ಧಿಗೆ ಅನುಕೂಲವಾಗಲಿದೆ. ಆದ್ದರಿಂದ ಮುಂಬರುವ