ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆತಿರುಕ ಆಗಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗಲು ದರೋಡೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಗುರುಮಿಠಕಲ್ನಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮಲೇಷಿಯಾದಿಂದ ಮರಳು ತರಿಸುತ್ತಿದೆ. ಸಿಮೆಂಟ್ಗೂ ಅಧಿಕ ಬೆಲೆ ಮರಳಿಗೆ ನಿಗದಿ ಮಾಡುವ ಮೂಲಕ ಹಗಲು ದರೋಡೆ ನಡೆಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ. ಬೆಂಗಳೂರು ನಗರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ, ಸುಲಿಗೆ ಹೆಚ್ಚಿದೆ ಎಂಬುದನ್ನು ಅಪರಾಧಾ