ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲದಕ್ಕೂ ಗೃಹ ಸಚಿವರು ರಾಜೀನಾಮೆ ಕೊಡಲು ಆಗುವುದಿಲ್ಲ. ಬಿಜೆಪಿಯವರು ಎಲ್ಲದರಲ್ಲೂ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಜೀವ ಅಮೂಲ್ಯವಾದುದು, ಕೊಲೆ ನಡೆಯಬಾರದಿತ್ತು. ಕೊಲೆ ಮಾಡಿದವರಿಗೆ ಶಿಕ್ಷೆಯಾಗಬೇಕು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿರುವ ಸಿದ್ದರಾಮಯ್ಯ ಸಮಾಜದಲ್ಲಿ ಕೋಮು ಗಲಭೆ ನಡೆಯಲು ಬಿಜೆಪಿ ಕಾರಣ ಎಂದು ಆರೋಪಿಸಿದ್ದಾರೆ.