ಬೆಳಗಾವಿ (ಆ.12): ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಾಗಿನಿಂದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಗೆ ನಿತ್ಯ ಕೆಟ್ಟಕೆಟ್ಟಕನಸುಗಳು ಬೀಳುತ್ತಿವೆ. ಆ ಕೆಟ್ಟಕನಸು ನನಸಾಗಲು ಸಾಧ್ಯವಿಲ್ಲ. ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಿಯಾಗಿ ಆಡಳಿತ ಮಾಡಿದ್ದರೆ ಕಾಂಗ್ರೆಸ್ನವರೇ ಮತ್ತೆ ಅಧಿಕಾರಕ್ಕೆ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷಗಳ ಮೊದಲೇ ನಾನು ಮುಂದಿನ ಮುಖ್ಯಮಂತ್ರಿ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಅಲ್ಲದೇ, ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್,