ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಿಎಮ್ ಸಿದ್ದರಾಮಯ್ಯ ವಿಶೇಷ ಲೇಖನ ಬರೆದಿದ್ದು,ಯಾವುದೇ ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳೆದರೂ, ತನಗೆ ಅಕ್ಷರ ಕಲಿಸಿದ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲ. ಮರೆಯಬಾರದೂ ಕೂಡಾ. ನನ್ನ ಬದುಕಿನಲ್ಲಿ ರಾಜಪ್ಪ ಮೇಷ್ಟ್ರು ಬರದೆ ಹೋಗಿದ್ದರೆ ಬಹುಶಃ ನಾನು ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಿರಲಿಲ್ಲ. ನನ್ನ ಮೊದಲ ಶಿಕ್ಷಕ ನಂಜೇಗೌಡರು. ಅವರು ನನಗೆ ವೀರಮಕ್ಕಳ ಕುಣಿತ ಕಲಿಸುತ್ತಿದ್ದರು. ಒಂದು ದಿನ ನಮ್ಮೂರಿನ ರಾಜಪ್ಪ ಮೇಷ್ಟ್ರ ಕಣ್ಣಿಗೆ ನಾನು ಬಿದ್ದೆ. ಅವರು ನನ್ನನ್ನು