ಬಳ್ಳಾರಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಪರವಾಗಿ ಸಿದ್ದರಾಮಯ್ಯ ಪ್ರಚಾರಕ್ಕೆ ಆಗಮಿಸಿದ್ದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದ ಅವರು, ಬಳಿಕ ಮೊಬೈಲ್ನಲ್ಲಿ ಬ್ಯೂಸಿಯಾಗಿದ್ದರು. ಕೆಲ ಕ್ಷಣಗಳಲ್ಲೇ ಕಾರು ಹತ್ತುತ್ತಿದ್ದಂತೆ ಕಾರಿನ ಬಾಗಿಲ ಬಳಿ ಕುಸಿದಿದ್ದಾರೆ. ಸಿದ್ದರಾಮಯ್ಯ ಅವರು ಕುಸಿದು ಬೀಳುತ್ತಿದ್ದಂತೆ ಹಿಡಿದುಕೊಂಡ ವೈದ್ಯರು, ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದರು. ಗ್ಲೂಕೋಸ್