ಇಂದು ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಚಿವ ಸಂಪುಟ ರಚನೆ, ವಿಸ್ತರಣೆ ಮತ್ತು ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲೇ ಬ್ಯುಸಿಯಾಗಿದ್ದರು. ಈ ಸಂಬಂಧ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿದ್ದು, ರಾಜಧಾನಿ ಬಿಟ್ಟು ಬೇರೆ ಜಿಲ್ಲೆಗಳಲ್ಲಿ ಹೋಗಲು ಸಾಧ್ಯವಾಗಿರಲಿಲ್ಲ. ಇದೀಗ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಮುಖ್ಯಮಂತ್ರಿಯಾದ ನಂತರ ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯರವರ ಮೊದಲ ಭೇಟಿ ಇದಾಗಿದೆ