ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ನಡುವಿನ ಗುದ್ದಾಟದಿಂದ ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪುಗಳಾಗಿವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಭರವಸೆಗಳನ್ನು ನೀಡಿ ವೃದ್ಧರಿಗೆ ಕಳೆದ ಐದು ತಿಂಗಳಿನಿಂದ ಮಾಶಾಸನ ನೀಡಿಲ್ಲ. ಆದರೆ, ಹೋದ ಕಡೆಯಲ್ಲೆಲ್ಲ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ ಎಂದು ಬೊಗಳೆ ಬಿಡುತ್ತಿದ್ದಾರೆ