ಮೈಸೂರು ವಿಶ್ವ ವಿದ್ಯಾಲಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ಸದಸ್ಯರೊಬ್ಬರು ಶಿಫಾರಸು ಮಾಡಿದ್ದಾರೆ. ಸಿಂಡಿಕೇಟ್ ಸದಸ್ಯ ಎಂ.ಎಸ್.ಎಸ್.ಕುಮಾರ ಅವರು ಮೈಸೂರು ಕುಲಪತಿಗೆ ಪತ್ರ ಬರೆದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸುತ್ತೂರು ಶ್ರೀ, ಇಸ್ರೋ ಅಧ್ಯಕ್ಷ ಕಿರಣಕುಮಾರ ಹಾಗೂ ಸಾಲುಮರದ ತಿಮ್ಮಕ್ಕ ಅವರಿಗೆ 2018ನೇ ಸಾಲಿನಲ್ಲಿ ಗೌರವ ಡಾಕ್ಟರೇಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸಮಾಜದಲ್ಲಿ ಗಣ್ಯವ್ಯಕ್ತಿಗಳಿಗೆ ನೀಡುವ ಡಾಕ್ಟರೇಟ್ ಪದವಿಗೆ ಸಿದ್ದರಾಮಯ್ಯ ಅವರು ಅರ್ಹತೆ ಹೊಂದಿದ್ದಾರೆ. ಇಂತಹವರಿಗೆ ಡಾಕ್ಟರೇಟ್ ನೀಡಿದರು