ಚಿಕ್ಕಮಗಳೂರು : ಯಾರೇ ಆದರೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರೋಕ್ಷವಾಗಿ ಅನರ್ಹ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಅವರು, ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈಗಾಗಲೇ ಕೆಲವರು ನನ್ನನ್ನ ಸಂಪರ್ಕಿಸಿದ್ದಾರೆ. ಆದರೆ ಎಲ್ಲವನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಪಕ್ಷಕ್ಕೆ ಸೇರಿಕೊಳ್ಳುವವರಿಗೆ ಉಪಚುನಾವಣೆಯ ಟಿಕೆಟ್ ನೀಡುವ ಕುರಿತು