ಬೆಳಗಾವಿ : ಯಾವುದೇ ಕಾರಣಕ್ಕೂ ಕೋಲಾರದಿಂದ ಸಿದ್ದರಾಮಯ್ಯ ನಿಲ್ಲುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಭವಿಷ್ಯ ಹೇಳುತ್ತಿಲ್ಲ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಡ್ರಾಮಾ ಮಾಡುತ್ತಿದ್ದಾರೆ. ಮೈಸೂರಿಗೆ ಬರಲು ಪ್ರಯತ್ನ ಮಾಡುತ್ತಿದ್ದಾರೆ.ಕೋಲಾರದಲ್ಲಿ ನಿಂತುಕೊಂಡ್ರೇ ಅವರು ಮನೆಗೆ ಹೋಗುವುದು ನಿಶ್ಚಿತ ಅಂತಾ ಗೊತ್ತಿದೆ. ಆದ್ರೂ ಸುಮ್ಮನೆ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದರು.ನನ್ನ ಪ್ರಕಾರ ಅವರು ಕೋಲಾರದಲ್ಲಿ ನಿಲ್ಲುವುದಿಲ್ಲ, ಮೈಸೂರಿಗೆ ಹೋಗಬಹುದು.