ಬೆಂಗಳೂರು: ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ತಾವು ಸಮ್ಮಿಶ್ರ ಸರ್ಕಾರದ ಬಗ್ಗೆ ಅಸಮಾಧಾನಗೊಂಡಿರುವುದಾಗಿ ಬಂದಿರುವ ವರದಿಗಳನ್ನು ತಳ್ಳಿ ಹಾಕಿದ್ದಾರೆ.ಬಜೆಟ್ ವಿಚಾರದ ಬಗ್ಗೆ ಜೆಡಿಎಸ್ ಜತೆಗೆ ತಮಗೆ ಅಸಮಾಧಾನವಿದೆ ಎಂಬ ವರದಿಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ನಾನು ಅಸಮಾಧಾನಗೊಂಡಿದ್ದೇನೆ ನಿಮಗ್ಯಾರೀ ಹೇಳಿದ್ದು? ಎಂದು ಪ್ರಶ್ನಿಸಿದ್ದಾರೆ.ನಾನು ಯಾವಾಗ, ಯಾವ ಅರ್ಥದಲ್ಲಿ ಆ ಹೇಳಿಕೆ ನೀಡಿದೆ ಎಂಬುದು ನಿಮಗೆ ಗೊತ್ತಿಲ್ಲ. ನಾನು ಸಾಮಾನ್ಯವಾಗಿ ನನ್ನ ಆಪ್ತರೊಂದಿಗೆ