ಮೈಸೂರು: ಮೈಸೂರು ಮೇಯರ್ ಸ್ಥಾನ ವಿಚಾರವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತಿಕ್ಕಾಟ ನಡೆದಿತ್ತು. ಆದರೆ ಇದು ದೋಸ್ತಿ ಸರ್ಕಾರದ ಮೇಲೆ ಪರಿಣಾಮ ಬೀರುವ ಮೊದಲೇ ಎರಡೂ ಪಕ್ಷಗಳು ಒಮ್ಮತಕ್ಕೆ ಬಂದಿವೆ.ಬೆಂಗಳೂರಿನಲ್ಲಿ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟಿದ್ದೇವೆ. ಹಾಗಾಗಿ ಮೈಸೂರಿನಲ್ಲಿ ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟು ಕೊಡಲಿ ಎಂದು ಸಾ ರಾ ಮಹೇಶ್ ಆಗ್ರಹಿಸಿದ್ದರು.ಇದಕ್ಕೆ ಪ್ರತ್ಯುತ್ತರ ನೀಡಿದ್ದ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಟಿ ದೇವೇಗೌಡರಿದ್ದಾರೆ.