ಕೊವಿಡ್ ನಿಂದ ಮೃತಪಟ್ಟವರಿಗೆ 5 ಲಕ್ಷ ಕೊಡಿ: ಸಿದ್ದರಾಮಯ್ಯ ಬೇಡಿಕೆ

ಬೆಂಗಳೂರು| Krishnaveni K| Last Modified ಮಂಗಳವಾರ, 15 ಜೂನ್ 2021 (09:38 IST)
ಬೆಂಗಳೂರು: ಕೊವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ನಿನ್ನೆ ಘೋಷಣೆ ಮಾಡಿದ್ದರು.
 > ಆದರೆ 1 ಲಕ್ಷ ರೂ. ಸಾಕಾಗಲ್ಲ, 5 ಲಕ್ಷ ರೂ. ನೀಡಿ ಎಂದು ವಿಪಕ್ಷ ನಾಯಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದಕ್ಕೆ ಕೇಂದ್ರದ ನೆರವು ಪಡೆಯಿರಿ ಎಂದಿದ್ದಾರೆ.>   ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬದವರಿಗೆ ಕೊವಿಡ್ ನಿಂದ ಮೃತಪಟ್ಟರೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಇದನ್ನು 5 ಲಕ್ಷಕ್ಕೆ ಏರಿಕೆ ಮಾಡಿ. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :