ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ವಂಚಿತರ ಅಸಮಾಧಾನ ಜೋರಾಗಿದ್ದು, ಇದಕ್ಕೆ ಸಿದ್ದರಾಮಯ್ಯನವರ ಕುಮ್ಮಕ್ಕು ಕಾರಣ ಎಂಬ ಆರೋಪ ಕೇಳಿಬಂದಿದೆ.ಬಂಡಾಯವೆದ್ದಿರುವ ಶಾಸಕರ ಪೈಕಿ ಬಹುತೇಕರು ಮಾಜಿ ಸಿಎಂ ಸಿದ್ದರಾಮಯ್ಯನವರ ಆಪ್ತರೇ ಆಗಿರುವುದರಿಂದ ಅವರ ಕುಮ್ಮಕ್ಕಿನಿಂದಲೇ ಈ ಅಸಮಾಧಾನ ಹೊಗೆ ಎದ್ದಿದೆ ಎಂಬ ಆರೋಪಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ.ಹೀಗಾಗಿ ಇದೀಗ ಕಾಂಗ್ರೆಸ್ ಹೈಕಮಾಂಡ್ ನೀವೇ ಇದನ್ನು ಬಗೆಹರಿಸಿ ಎಂದು ಸಿದ್ದರಾಮಯ್ಯಗೆ ತಾಕೀತು