ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆಯ ಕಣ ರಂಗೇರುತ್ತಿದ್ದು, ಬಿಜೆಪಿಯ ಬಿ ಶ್ರೀರಾಮುಲು ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನಡುವೆ ಮತ್ತೆ ಮಾತಿನ ಚಕಮಕಿ ಜೋರಾಗಿದೆ.ಮೊನ್ನೆಯಷ್ಟೇ ಶ್ರೀರಾಮುಲುಗೆ 420, ಸೆಕ್ಷನ್ 326, 307 ಮುಂತಾದವು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದಿದ್ದ ಸಿದ್ದರಾಮಯ್ಯ ಮತ್ತೆ ಸರಣಿ ಟ್ವೀಟ್ ಗಳ ಮೂಲಕ ಟೀಕಾ ಪ್ರಹಾರ ಮುಂದುವರಿಸಿದ್ದಾರೆ.ತಾನು ಲೋಕಸಭೆಯಲ್ಲಿ ಅತೀ ಹೆಚ್ಚು ಬಾರಿ ಮಾತನಾಡಿದ್ದೇನೆ ಎಂಬ ರಾಮುಲು ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಪರಿಶಿಷ್ಟರ ಕಲ್ಯಾಣ