ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ರಾಜಭವನ ಚಲೋ ನಡೆಸಿದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಮೂಲಕ ಮುತ್ತಿಗೆ ಹಾಕಲು ಯತ್ನಿಸಿದಾಗ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ