ಬಾಗಲಕೋಟೆ : ಲೋಕಸಭಾ ಚುನಾವಣೆ ಬಳಿಕ ಅಂದರೆ 2019ರಲ್ಲೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಬಸವಕಲ್ಯಾಣ ಶಾಸಕ ಬಿ ನಾರಾಯಣ್ ರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಾದಾಮಿಯಲ್ಲಿ ನಡೆದ ಜಿಲ್ಲಾಮಟ್ಟದ ಗಂಗಾಮತಸ್ಥ ಅಂಬಿಗರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಾದ ನಾಲ್ಕೈದು ತಿಂಗಳೊಳಗೆ ಸಿದ್ದರಾಮಯ್ಯ ನೂರಕ್ಕೆ ನೂರಷ್ಟು ಮತ್ತೆ ರಾಜ್ಯದ ಸಿಎಂ ಆಗುತ್ತಾರೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿ ಒಪ್ಪಂದದ ಪ್ರಕಾರ ಕುಮಾರಸ್ವಾಮಿ ಅವರೇ 5 ವರ್ಷಗಳ ಸಿಎಂ.