ಬೆಂಗಳೂರು : ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರ ಕುರಿತು ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. ಪಂಚರಾಜ್ಯ ಚುನಾವಣೆಯ ಫಲಿತಾಂಶಗಳ ಪೈಕಿ ಕಾಂಗ್ರೆಸ್ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬಹುಮತದತ್ತ ಮುನ್ನುಗ್ಗುತ್ತಿದೆ. ಅಲ್ಲದೇ ಛತ್ತೀಸಗಢದಲ್ಲಿ ಸ್ಪಷ್ಟ ಮುನ್ನಡೆಯನ್ನು ಪಡೆದಿದೆ. ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಹೇಳಿದ್ದಾರೆ. ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ. ಇದು ಗೆದ್ದು ಬೀಗುವ ಸಮಯವಲ್ಲ.