ಬೆಂಗಳೂರು : ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನಲೆಯಲ್ಲಿ ಇನ್ನುಮುಂದೆ ದೇಶದಲ್ಲಿ ಮೋದಿಯ ಮೋಡಿ ಹಾಗೂ ಅಮಿತ್ ಶಾ ಮ್ಯಾಜಿಕ್ ಎಲ್ಲವೂ ಬರಿ ಕನಸಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪಂಚರಾಜ್ಯ ಚುನಾವಣೆಯಲ್ಲಿ ಸೋಲನ್ನು ಕಂಡಿರುವ ಬಿಜೆಪಿಗೆ ರಾಷ್ಟ್ರದಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಡಬೇಕಾದ ದುಸ್ಥಿತಿ ಬಂದಿದೆ. ದೇಶದಲ್ಲಿ ಪ್ರಧಾನಿ ಮೋದಿಯವರ ವರ್ಚಸ್ಸು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಹೀಗಾಗಿ ಇನ್ನುಮುಂದೆ ದೇಶದಲ್ಲಿ