ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಯಶಸ್ವಿಯಾಗಿ ಸ್ಟೆಂಟ್ ಅಳವಡಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದ ಸ್ವಾಮೀಜಿಗೆ ಅನ್ನ ನಾಳದ ಸಮಸ್ಯೆ ಇತ್ತು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಡಾ. ರವೀಂದ್ರ ನೇತೃತ್ವದಲ್ಲಿ ಶತಾಯುಷಿ ಶ್ರೀಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.ಬೆಳಿಗ್ಗೆಯಿಂದಲೇ ಶ್ರೀಗಳ ಅನಾರೋಗ್ಯದ ಸುದ್ದಿ ಕೇಳಿ ಭಕ್ತರು ಆತಂಕಗೊಳಗಾಗಿದ್ದರು. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆಂಬ ಸುದ್ದಿಯನ್ನು ಸ್ವತಃ ಸಿದ್ಧಗಂಗಾ ಮಠದ ಕಿರಿಯ ಶ್ರೀಗಳು