ಚಿಕ್ಕಮಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್ ಅವರ ಅಂತ್ಯಕ್ರಿಯೆಯು ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ನಡೆಯಲಿರುವುದಾಗಿ ತಿಳಿದುಬಂದಿದೆ. ಸಿದ್ದಾರ್ಥ್ ಅವರ ಮೃತದೇಹ ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಪತ್ತೆಯಾಗಿದ್ದು, ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಾಫಿ ಕಿಂಗ್ ಸಿದ್ದಾರ್ಥ್ ಅವರ ಪಾರ್ಥಿವ ಶರೀರವನ್ನು 11 ಗಂಟೆಗೆ ಸುಮಾರಿಗೆ ಚಿಕ್ಕಮಗಳೂರಿಗೆ ರವಾನೆ ಮಾಡಲಾಗುತ್ತಿದೆ. ಬೇಲೂರು ಚೇತನಹಳ್ಳಿಯ