ದೇಶದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡಿದ್ದ PFI ಹಾಗೂ ಅದರ ಸಹವರ್ತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದನ್ನು ಇಂಧನ ಸಚಿವ V.ಸುನಿಲ್ ಕುಮಾರ್ ಸ್ವಾಗತಿಸಿದ್ದಾರೆ. PFI, ಐಸಿಸ್ನಂಥ ಜಾಗತಿಕ ಉಗ್ರ ಸಂಘಟನೆಗಳ ಜತೆ ಸಂಬಂಧ ಹೊಂದಿತ್ತು. ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲ, ಮುಸ್ಲಿಂ ಯುವಕರ ತಲೆಕೆಡಿಸಿ ಅವರನ್ನು ಐಸಿಸ್ ಸಂಘಟನೆಗೆ ಕಳುಹಿಸುತ್ತಿತ್ತು. ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆ ಪಾತ್ರ