ಲಿಂಗಾಯತ ಸಿಎಂ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಗೋಕಾಕ್ನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚಿ ಹೇಳಲಾಗುತ್ತಿದೆ. ಬಿಜೆಪಿಯವರು ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದ್ದಾರೆ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಪರ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬ್ಯಾಟ್ ಬೀಸಿದ್ದಾರೆ. ಇದೇ ವೇಳೆ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರೇ