ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಡುವ ತೀರ್ಮಾನ ಮಾಡಿದ್ದು BJP ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ಈ ಮೂಲಕ ಏರ್ಪೋರ್ಟ್ಗೆ ಕೆಂಪೇಗೌಡರ ಹೆಸರಿಟ್ಟಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಎಂ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆ ಹೇಳಿಕೊಳ್ಳುವ ಸಿದ್ದರಾಮಯ್ಯನವರೇ. ಬೆಂಗಳೂರು ಏರ್ಪೋರ್ಟ್ಗೆ ನಾಡಪ್ರಭು ಕೆಂಪೇಗೌಡರ