ರಸ್ತೆ ರಂಪಾಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಕಳೆದ ಎಂಟು ತಿಂಗಳಿಂದ ಜೈಲಿನಲ್ಲಿದ್ದಾರೆ. ಅವರನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೊಳಿಸುವ ಸಾಧ್ಯತೆ ಇದೆ. ಗಣರಾಜ್ಯೋತ್ಸವ ದಿನ ಒಟ್ಟು 51 ಕೈದಿಗಳನ್ನು ಬಿಡುಗಡೆಗೊಳಿಸಲು ಪಂಜಾಬ್ನ ಆಪ್ ಸರ್ಕಾರ ತೀರ್ಮಾನಿಸಿದೆ. ಇದರಲ್ಲಿ ಸಿಧು ಅವರ ಹೆಸರು ಕೂಡ ಇದೆ. ಈ ನಿರ್ಧಾರ ಕುರಿತು ಶೀಘ್ರವೇ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.