ಬೆಳಗಾವಿ: ಕನ್ನಡ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಸಿವೆ. ನಗರದ ಚೆನ್ನಮ್ಮ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಜೈ ಮಹಾರಾಷ್ಟ್ರ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಹೆಬ್ಬಾಳ್ಕರ್ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು