ಕೋವಿಡ್ 19 ವೈರಸ್ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಉತ್ತರಕನ್ನಡ ಜಿಲ್ಲಾಡಳಿತವು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಅನಾವಶ್ಯಕವಾಗಿ ಯಾವುದೇ ಕಾರಣಗಳಿಲ್ಲದೇ ಓಡಾಡುವವರ ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನದ ನೊಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಎಚ್ಚರಿಕೆ ನೀಡಿದ್ದರು. ಆದರೆ ಕೆಲವು ಸಾರ್ವಜನಿಕರು ಇದಕ್ಕೂ ಬಗ್ಗದ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಕ್ಕೆ ಅವರು ಮುಂದಾಗಿದ್ದಾರೆ.ಯಾವುದೇ ಕಾರಣಗಳಿಲ್ಲದೇ ಅನಗತ್ಯವಾಗಿ ರಸ್ತೆಯಲ್ಲಿ ಓಡಾಡಿ ಕಾಯ್ದೆ