ಮೈಸೂರು: ಈ ಬಾರಿ ಸಿಎಂ ಸಿದ್ದರಾಮಯ್ಯ ವರುಣಾ ಬದಲು ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ. ಹೀಗಾಗಿ ಅವರ ಎದುರಾಳಿಯನ್ನು ಪಣಕ್ಕಿಡಲು ಬಿಜೆಪಿ ಮುಂದಾಗಿದೆ ಎಂಬ ಗಾಳಿ ಮಾತು ಎಲ್ಲೆಡೆ ಹರಿದಾಡುತ್ತಿದೆ. ಸಿದ್ದರಾಮಯ್ಯರನ್ನು ಶತಾಯ–ಗತಾಯ ಸೋಲಿಸಬೇಕೆಂದು ಜೆಡಿಎಸ್ ತೊಡೆ ತಟ್ಟಿ ಕಾರ್ಯತಂತ್ರ ರೂಪಿಸುತ್ತಿದೆ. ಇತ್ತ ಬಿಜೆಪಿ ಡಾ. ವಿದ್ಯಾಭೂಷಣರನ್ನ ಕಣಕ್ಕಿಳಿಸಲು ರಣತಂತ್ರ ಹೆಣೆದಿದೆ ಎಂದು ಸುದ್ದಿವಾಹಿನಿಗಳು ವರದಿ ಮಾಡಿವೆ.ಒಂದು ಕಾಲದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರಾಗಿದ್ದ ಇವರು ಸದ್ಯ ಗೃಹಸ್ಥಾಶ್ರಮದಲ್ಲಿದ್ದಾರೆ. ಅಲ್ಲದೆ ಉಡುಪಿ