ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಗೌರಿ ಲಂಕೇಶ್ ನಿವಾಸಕ್ಕೆ ತೆರಳಿದ್ದ ಎಸ್`ಐಟಿ ಅಧಿಕಾರಿಗಳು ಕೂಲಂಕುಶವಾಗಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸುತ್ತಮುತ್ತ ಸಹ ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲೂ ಕೆಲ ದಾಖಲಾತಿಗಳನ್ನ ವಶಕ್ಕೆ ಪಡೆದು ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ. ಬಸವನಗುಡಿಯಲ್ಲಿರುವ ಪತ್ರಿಕಾ ಕಚೇರಿಗೂ ಭೇಟಿ ನೀಡಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಜೊತೆಗೆ ಹಂತಕನ ಪತ್ತೆಗೆ ರೇಖಾ ಚಿತ್ರ ಸಿದ್ಧಪಡಿಸುತ್ತಿದ್ಧಾರೆ. ಮಾಧ್ಯಮಗಳ ವರದಿಗಳ ಪ್ರಕಾರ, ಆರೋಪಿಯ