ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರಿಗಾಗಿ ತೀವ್ರ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ ಗೌರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಕೇಂದ್ರ ಸಚಿವ ಅನಂತ ಕುಮಾರ್ ಪತ್ನಿ ತೇಜಸ್ವಿನಿ ಸೇರಿದಂತೆ 50 ಮಂದಿಯನ್ನು ವಿಚಾರಣೆಗೊಳಪಡಿಸಲಿದೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.ಗೌರಿ ಲಂಕೇಶ್ ವಿರುದ್ಧ ಸುಮಾರು 160 ಕ್ಕೂ ಹೆಚ್ಚು ಮಂದಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇವರಲ್ಲಿ ಸುಮಾರು 50 ಮಂದಿಯನ್ನು ವಿಚಾರಣೆಗೊಳಪಡಿಸಲು