ಉತ್ತರ ಪ್ರದೇಶದ ಜೇವಾರ್ ನಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ

bangalore| geetha| Last Modified ಗುರುವಾರ, 25 ನವೆಂಬರ್ 2021 (20:46 IST)
ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜೇವಾರ್​​ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದಾರೆ.ಈ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಕಾರ್ಯ 10,050 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಡೆಯುತ್ತಿದೆ. 1300 ಹೆಕ್ಟೇರ್​​ಗೂ ಹೆಚ್ಚಿನ ವಿಸ್ತೀರ್ಣದ​ ಪ್ರದೇಶದಲ್ಲಿ ನಿರ್ಮಾಣವಾಗ್ತಿದೆ..ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇದು ದೆಹಲಿ-ಎನ್‌ಸಿಆರ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೋಟ್ಯಂತರ ಜನರಿಗೆ ಪ್ರಯೋಜನವನ್ನು ನೀಡುತ್ತದೆ..ಈ ಯೋಜನೆಯಿಂದ ಜನರ ಜೀವನವನ್ನು ಸಂಪೂರ್ಣವಾಗಿ ಪರಿವರ್ತಿಸುತ್ತದೆ. ಶೀಘ್ರದಲ್ಲೇ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಸಿದ್ಧವಾಗಲಿದೆ ಎಂದು ಹೇಳಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :